ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ದೀಪ ಪ್ರದಾನಮ್” ಕಾರ್ಯಕ್ರಮ

0

ಪುತ್ತೂರು: ಆಂಗ್ಲ ಭಾಷಾ ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿಯನ್ನು, ಧರ್ಮವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ.  ಈ ಕಾರ್ಯ ಯಶಸ್ವಿಯಾಗಿ ನೆರವೇರಿದಾಗ ಭಾರತ ವಿಶ್ವಗುರುವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ “ದೀಪ ಪ್ರದಾನಮ್” ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ನಮ್ಮ ಸಂಸ್ಕೃತಿಯ ಆಚರಣೆಗಳಿಗೆ ಅದರದ್ದೇ ಆದ ವೈಶಿಷ್ಟ್ಯತೆ, ವೈಜ್ಞಾನಿಕ ಹಿನ್ನೆಲೆ ಇದೆ. ಸಂಸ್ಕಾರದ ಅಳವಡಿಕೆ ಜೀವನದ ಯಶಸ್ಸಿಗೆ ದಾರಿದೀಪವಾಗಲಿ. ನಿಮ್ಮ ಸಾಧನೆ ಕಿರಿಯರಿಗೆ ದಾರಿದೀಪವಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶಿವಪ್ರಕಾಶ್ ಮಾತನಾಡಿ, ಈ ಜ್ಞಾನ ಜ್ಯೋತಿ ವರ್ಗಾವಣೆ ಮತ್ತು ಹಿರಿಯ ವಿದ್ಯಾರ್ಥಿಗಳು ಮಾಡಿದ ಸಾಧನೆ ಮುಂದಿನ ಪೀಳಿಗೆಗೆ ಆದರ್ಶ ಹಾಗೂ ಪ್ರೋತ್ಸಾಹದಾಯಿಯಾಗಲಿ ಎಂದು ನುಡಿದರು.

ವೇದಿಕೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕ ರವಿನಾರಾಯಣ ಎಂ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶಾಂತಿ ಶೆಣೈ, ಶಾಲಾ ಮುಖ್ಯಗುರುಗಳಾದ ಸತೀಶ್ ಕುಮಾರ್ ರೈ, ಸಂಧ್ಯಾ, ಮಮತಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಂತಿ ಶೆಣೈಯವರು ಶಾಲಾ ಅಭಿವೃದ್ಧಿಗೆ 25 ಸಾವಿರ ರೂಪಾಯಿ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳು 1 ಲಕ್ಷ ರೂಪಾಯಿ ದೇಣಿಗೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಶಿಕ್ಷಕ-ಶಿಕ್ಷಕೇತರ ವೃಂದ ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 9ನೇ ತರಗತಿಯ ವಿದ್ಯಾರ್ಥಿನಿ ಅರ್ಚನಾ ಸ್ವಾಗತಿಸಿ, ಸೃಷ್ಟಿ ವಂದಿಸಿದರು. ಸಮೃದ್ಧಿ ಶೆಟ್ಟಿ ಹಾಗೂ ಜಾನ್ವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here