ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪರಮೇಶ್ವರನ ಯಜ್ಞಗಳಲ್ಲಿ ಅತ್ಯಂತ ಶ್ರೇಷ್ಠವಾಗಿ ಪುಣ್ಯ ಫಲಪ್ರದವಾದ ಅತಿರುದ್ರ ಮಹಾಯಾಗವು ಮಾ.19ರಂದು ವಿವಿಧ ವಿದ್ವಾಂಸರ ಸಮಾಗಮದೊಂದಿಗೆ ನಡೆಯಲಿದೆ.
ಮಾ.18ಕ್ಕೆ ಸಂಜೆ ಯಜ್ಞಮಂಟಪದಲ್ಲಿ ಶುದ್ಧಿ, ದೇವತಾ ಪ್ರಸಾದ, ರಾಕ್ಷೋಘ್ನ ಹೋಮ, ವಾಸ್ತುಬಲಿ ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಶ್ರೀಪಾದಂಗಳವರು, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಶ್ರೀಗಳೂ ಅಶೀರ್ವಚನ ನೀಡಲಿದ್ದಾರೆ. ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಶ್ರೀ ಕ್ಷೇತ್ರ ಸೌತಡ್ಕದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಮಾ.19ಕ್ಕೆ ಅತಿರುದ್ರ ಯಾಗ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿ ಸಂಚಾಲಕ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ.