ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

0

ಪುತ್ತೂರು: ಅಕ್ರಮ ಮದ್ಯ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಸರ್ವೆ ನಿವಾಸಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮಾ.3ರಂದು ಸರ್ವೆ ಗ್ರಾಮದ ನಾರಾಯಣ ಎಂಬವರ ವಿರುದ್ಧ ಕಲo 32,34, 43 ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಆರೋಪಿ ನಾರಾಯಣ ಅವರು ನಿರೀಕ್ಷಣಾ ಜಾಮೀನು ಕೋರಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿ ಪರ ನ್ಯಾಯವಾದಿಗಳಾದ ಉದಯ ಚಂದ್ರ ಕರಂಬಾರು ಮತ್ತು ಅಕ್ಷಿತ್ ಮುರ ವಾದಿಸಿದ್ದರು.

LEAVE A REPLY

Please enter your comment!
Please enter your name here