





ಪುತ್ತೂರು: ಬಡಗನ್ನೂರು ಆದಿದೈವ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರೆ ಗುರುಪೀಠ, ದೇಯಿಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನವಾಗಿರುವ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ಮಾ.16 ರಿಂದ 20ರ ವರೆಗೆ ವಿಜ್ರಂಭಣೆಯ ವಾರ್ಷಿಕ ಜಾತ್ರಾ ಮಹೋತ್ಸವು ಮೂಡಬಿದ್ರೆ ಶ್ರೀ ಶಿವಾನಂದ ತಂತ್ರಿಯವರ ನೇತೃತ್ವದಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ತೌಳವ ಪರಂಪರೆಯ ಅನುಸಾರ ಆರಂಭವಾಗಿದೆ.


ಮಾ.17 ರಂದು ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ ತ್ರಿನಾರಿಕೇಳ, ಗಣಪತಿ ಹೋಮ, ಗುರುಪೂಜೆ, ತೋರಣ ಮುಹೂರ್ತ, ನಾಗದೇವರ ಸಾನಿಧ್ಯದಲ್ಲಿ ಶುದ್ಧಿಹೋಮ, ಕಲಶಾಭಿಷೇಕ, ಆಶ್ಲೇಷ ಬಲಿ, ಪ್ರಸನ್ನಪೂಜೆ, ಧೂಮಾವತಿ ಮತ್ತು ಕುಪ್ಪೆ ಪಂಜುರ್ಲಿ ಸಾನಿಧ್ಯದಲ್ಲಿ ನವನ ಪ್ರಧಾನ, ಒದಗುವ ವೃಷಭ ಲಗ್ನ ಸುಮೂಹರ್ತದಲ್ಲಿ ಧ್ವಜಾರೋಹಣ, ಪಂಚಪರ್ವ ಸೇವೆ ಅಲಂಕಾರ, ಮೂಲಸ್ಥಾನ ಗರಡಿಯಲ್ಲಿ ಮಹಾಪೂಜೆ ಬಳಿಕ ಭಜನಾ ಸಂಕೀರ್ತನೆ, ಮಧ್ಯಾಹ್ನ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಅನ್ನಸಂತರ್ಪಣೆ, ಭಜನಾ ಸಂಕೀರ್ತನೆ, ಸಂಜೆ ದೂಮಾವತಿ ಬಲಿ ಉತ್ಸವ ಧರ್ಮ ಚಾವಡಿಯಲ್ಲಿ ಭಗವತಿ ಸೇವೆ ಮಹಾಪೂಜೆ ನಡೆಯಿತು.





ಶ್ರೀ ಕ್ಷೇತ್ರದ ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಅನುವಂಶಿಕ ಮೊಕ್ತೇಸರರು, ನೇಮೋತ್ಸವ ಸಮಿತಿ ಸಂಚಾಲಕರು ಮತ್ತು ಸದಸ್ಯರ ಸಹಿತ ಭಕ್ತರು ಅಧಿಕ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರದಲ್ಲಿ ಉಪಸ್ಥಿತರಿದ್ದರು.
ಇಂದು ಕ್ಷೇತ್ರದಲ್ಲಿ…
ಮಾ.18 ರಂದು ಬೆಳಿಗ್ಗೆ ಗಣಪತಿ ಹೋಮ, ಗುರುಪೂಜೆ, ಧೂಮಾವತಿ ಮತ್ತು ಕುಪ್ಪೆ ಪಂಜುರ್ಲಿ ಸಾನಿಧ್ಯದಲ್ಲಿ ಶುದ್ಧಕಲಶ ಹೋಮ, ಧೂಮಾವತಿ ನೇಮೋತ್ಸವ, ಮಧ್ಯಾಹ್ನ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಧೂಮಾವತಿ ಬಲಿ ಉತ್ಸವ, ಸಂಜೆ ಕಲ್ಲಾಲ್ದಾಯ ನೇಮೋತ್ಸವ, ರಾತ್ರಿ ಸತ್ಯ ಧರ್ಮ ಚಾವಡಿಯಲ್ಲಿ ಮಹಾಪೂಜೆ, ಕೊರತಿ ದೈವದ ನರ್ತನ ಸೇವೆ, ಕುಪ್ಪೆ ಪಂಜುರ್ಲಿ ನೇಮೋತ್ಸವ ಜರಗಲಿದೆ.





