ಸರಕಾರಿ ಮೆಡಿಕಲ್ ಕಾಲೇಜಿನ ಹೋರಾಟಕ್ಕಾಗಿ ಮನವಿ

0

ಉಪ್ಪಿನಂಗಡಿ: ಪುತ್ತೂರಿನ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಮತ್ತು ಸೇಡಿಯಾಪುವಿನಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಡೆಯುತ್ತಿರುವ ಅಭಿಯಾನದ ಭಾಗವಾಗಿ ಮಾ.30ರಂದು ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ವತಿಯಿಂದ ಪುತ್ತೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಮತ್ತು ಜನಾರೋಗ್ಯಕ್ಕಾಗಿ ನಾವು ಸಮಾವೇಶ ನಡೆಯಲಿದ್ದು, ಈ ಹೋರಾಟದ ಪ್ರಚಾರಾರ್ಥವಾಗಿ ಉಪ್ಪಿನಂಗಡಿಯಲ್ಲಿ ಸಾರ್ವಜನಿಕರಿಗೆ ಮನವಿ ಪತ್ರ ವಿತರಿಸುವ ಕಾರ್ಯಕ್ರಮ ಮಾ17ರಂದು ನಡೆಯಿತು.


ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಹಾಗೂ ಉಪ್ಪಿನಂಗಡಿಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪೇಟೆಯಲ್ಲಿರುವ ಅಂಗಡಿ, ಸಾರ್ವಜನಿಕರಿಗೆ ಮನವಿ ಪತ್ರ ವಿತರಿಸಲಾಯಿತು.


ಈ ಸಂದರ್ಭ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಉಪಾಧ್ಯಕ್ಷರಾದ ವಿಶ್ವಪ್ರಸಾದ ಸೇಡಿಯಾಪು, ಸಂಚಾಲಕ ಲಕ್ಷ್ಮೀಶ ಗಬ್ಲಡ್ಕ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪ್ಪಿನಂಗಡಿಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ, ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಯುನಿಕ್, ಸದಸ್ಯರಾದ ತೌಸೀಫ್ ಯು.ಟಿ., ಇರ್ಷಾದ್ ಯು.ಟಿ., ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ೩೪ ನೆಕ್ಕಿಲಾಡಿ ವಲಯ ಕಾಂಗ್ರೆಸ್ ಉಪಾಧ್ಯಕ್ಷೆ ಅನಿ ಮಿನೇಜಸ್, ಕಾರ್ಯದರ್ಶಿ ಕಲಂದರ್ ಶಾಫಿ, ಕರ್ನಾಟಕ ರಾಜ್ಯ ರೈತ ಸಂಘದ ದ.ಕ. ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್, ರೈತ ಮುಖಂಡ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಪ್ರಮುಖರಾದ ವಿಶುಕುಮಾರ್, ವಿದ್ಯಾಗೌರಿ, ಮೋರಿಸ್ ಮಸ್ಕರೇನ್ಹಸ್, ಅಮಳ ರಾಮಚಂದ್ರ, ಉಮೇಶ್ ನಟ್ಟಿಬೈಲ್, ಆದಂ ಕೊಪ್ಪಳ, ಮುಹಮ್ಮದ್ ಪೆರಿಯಡ್ಕ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here