ಅಕ್ರಮ ಗಾಂಜಾ ಮಾರಾಟ ಪ್ರಕರಣ -ಬಂಧಿತ ಆರೋಪಿಗೆ ಜಾಮೀನು

0

ಪುತ್ತೂರು:ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇರಿಸಿಕೊಂಡಿದ್ದ ಆರೋಪದಲ್ಲಿ ಬಂಧಿತನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಳ್ತಂಗಡಿ ಇಳಂತಿಲ ಗ್ರಾಮದ ನೇಜಿಕಾರು ಅಂಬೋಟ್ಟು ನಿವಾಸಿ ಮೊಹಮ್ಮದ್ ಶಾಫಿ ಎಂಬಾತ ಕೋಡಿಂಬಾಡಿ ಗ್ರಾಮದ ಸೇಡಿಯಾಪು ಬಸ್ ತಂಗುದಾಣದಲ್ಲಿ ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿ ಪೊಲೀಸರು ಅಲ್ಲಿಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದ.ಆತನನ್ನು ಹಿಡಿದು ವಿಚಾರಿಸಿದಾಗ ಆತನಲ್ಲಿ ರೂ.೬ ಸಾವಿರ ಮೌಲ್ಯದ ೧೯೦ ಗ್ರಾಂ ಗಾಂಜಾ ಇರುವುದು ಬೆಳಕಿಗೆ ಬಂದಿತ್ತು.ಗಾಂಜಾ ಮಾರಾಟಕ್ಕೆ ಗಿರಾಕಿ ಹುಡುಕಿಕೊಂಡಿದ್ದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದ.ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣೆಯ ಪೊಲೀಸರು ಆರೋಪಿಯಿಂದ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದರು.ಇದೀಗ ನ್ಯಾಯಾಲಯ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.ಆರೋಪಿ ಪರ ವಕೀಲ ವೆಂಕಟೇಶ್ ಸಿ.ಎಸ್.ವಾದಿಸಿದ್ದರು.

LEAVE A REPLY

Please enter your comment!
Please enter your name here