ಗ್ರಾಮಾಭಿವೃದ್ಧಿ ಕಾರ್ಯಗಳಿಗೆ ಬ್ಯಾಂಕ್ ಗಳ ಸಹಕಾರ ಸದಾ ಲಭ್ಯ – ಗಾಯತ್ರಿ ಆರ್

0

ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಬ್ಯಾಂಕ್ ಗಳು ಸದಾ ಬದ್ಧವಾಗಿವೆ ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ ಆರ್ ರವರು ತಿಳಿಸಿದರು.

ಪ್ರತಿಷ್ಠಾನದ ವಿವಿಧ ಗ್ರಾಮಗಳ ಸಮಿತಿಯ ಪದಾಧಿಕಾರಿಗಳ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷರು ಬ್ಯಾಂಕ್ ಗಳಿಂದ ಕೃಷಿಕರಿಗೆ ಹಾಗೂ ಗ್ರಾಮಾಂತರ ಪ್ರದೇಶದ ಇನ್ನಿತರ ಸಣ್ಣ ಉದ್ದಿಮೆದಾರರಿಗೆ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಗ್ರಾಮೀಣ ಸಮಿತಿಗಳು ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕೆಂದು ಕರೆ ನೀಡಿದರು. ನಗರದ ಬ್ಯಾಂಕ್ ಆಫ್ ಬರೋಡಾ ವಲಯ ಕಚೇರಿಯ ಸಭಾಂಗಣದಲ್ಲಿ ನೆರೆದ ಕಾರ್ಯಕ್ರಮದಲ್ಲಿ ಮಂಗಳೂರು ಮೀನುಗಾರಿಕಾ ಕಾಲೇಜಿನ ನಿವೃತ್ತ ಡೀನ್ ಡಾ. ಎಸ್ ಎಮ್ ಶಿವಪ್ರಕಾಶ್ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಲಾಭದಾಯಕವಾಗಿ ನಿರ್ವಹಿಸಬಲ್ಲ ವಿವಿಧ ಚಟುವಟಿಕೆಗಳ ಬಗ್ಗೆ ಸಂಪೂರ್ಣ ವಿವರ ನೀಡಿದರು. ನಿವೃತ್ತ ಪ್ರಾಂಶುಪಾಲರಾದ ಸೀತಾರಾಮ ಶೆಟ್ಟಿ ಅವರು ಮಳೆ ನೀರು ಕೊಯ್ಲಿನ ಮಹತ್ವದ ಬಗ್ಗೆ ವಿವರಣೆ ನೀಡಿದರು.

ಕಾರ್ಯಕ್ರಮದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಉಪಾಧ್ಯಕ್ಷರಾದ ಪ್ರೇಮನಾಥ ಆಳ್ವ, ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಗಿರಿಜಾತೆ ಭಂಡಾರಿ, ಕಡಮಜಲು ಸುಭಾಷ್ ರೈ, ಜಯ ಪ್ರಕಾಶ್ ರೈ, ಸತೀಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ರವರು ಸ್ವಾಗತಿಸಿ, ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಬಿ ರಾಜೇಂದ್ರ ರೈ ಯವರು ವಂದಿಸಿದರು.

LEAVE A REPLY

Please enter your comment!
Please enter your name here