ದ.ಕ ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

0

ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ-ಡಾ.ಚಂದ್ರ ಗುಪ್ತ

ಮಂಗಳೂರು: ದೈನಂದಿನ ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದು ಪಶ್ಚಿಮ ವಲಯ ಐಜಿಪಿ ಡಾ| ಚಂದ್ರ ಗುಪ್ತ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಫುಟ್ಬಾಲ್ ಮೈದಾನದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಅವರು ಉದ್ಘಾಟಿಸಿ ಮಾತನಾಡಿದರು.


ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಸಂಘಟನೆಗೂ ಈ ರೀತಿಯ ಕ್ರೀಡಾ ಕೂಟ ಸಹಕಾರಿ ಮಾನಸಿಕ ಮತ್ತು ದೈಹಿಕ ಒತ್ತಡ ಗಳನ್ನು ನಿವಾರಿಸಲು ಕ್ರೀಡೆ ಸಹಕಾರಿ ಎಂದು ಡಾ| ಚಂದ್ರ ಗುಪ್ತ ಶುಭ ಹಾರೈಸಿದರು.


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಕ್ರಿಕೆಟ್ ಪಂದ್ಯಾಟವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಿ ಮಾತನಾಡುತ್ತಾ, ಪಂದ್ಯದಲ್ಲಿ ಸೋಲು ಗೆಲುವು ಮುಖ್ಯವಲ್ಲ ಸುದ್ದಿ ಮನೆಯ ಒತ್ತಡದ ನಡುವೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.


ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆಜ್ಜಮಾಡ ರಮೇಶ್ ಕುಟ್ಟಪ್ಪ, ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಅವಳಿ ಚಿನ್ನದ ಪದಕ ವಿಜೇತ ಖುತ್ವಿಕ್ ಅಲೆವೂರಾಯ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಮಂಗಳೂರು. ಅಧ್ಯಕ್ಷ ಆರ್.ರಾಮಕೃಷ್ಣ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಕಾರ್ಯ ಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ,ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಪದಾಧಿಕಾರಿಗಳಾದ ವಿಜಯ ಕೋಟ್ಯಾನ್, ರಾಜೇಶ್ ದಡ್ಡಂಗಡಿ, ಸುರೇಶ್ ಡಿ ಪಳ್ಳಿ, ಶ್ರವಣ್ ಕುಮಾರ್ ನಾಳ, ಸುಖ್‌ಪಾಲ್ ಪೊಳಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.

LEAVE A REPLY

Please enter your comment!
Please enter your name here