ಪುತ್ತೂರು: ಪುತ್ತೂರು ಕಾಂಗ್ರೇಸ್ ನಲ್ಲಿ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಅವಕಾಶ ನೀಡುವಂತೆ ಪುತ್ತೂರು ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.
ಪುತ್ತೂರಿನಲ್ಲಿ ಮಹಿಳಾ ಕಾಂಗ್ರೆಸ್ ಪತ್ರಿಕಾ ಗೋಷ್ಠಿಯಲ್ಲಿ ಈ ಮಾಹಿತಿ ನೀಡಿದೆ.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ಸು, ಕೆಪಿಸಿಸಿ ಕಾರ್ಯದರ್ಶಿ ಸಾಯಿರ ಜುಬೇರ್, ಬ್ಲಾಕ್ ಉಪಾಧ್ಯಕ್ಷೆ ವಿಶಾಲಾಕ್ಷಿ ಬನ್ನೂರು ಬ್ಲಾಕ್ ಕೋಶಾಧಿಕಾರಿ , ಮಹಿಳಾ ಕಾಂಗ್ರೆಸ್ ಸದಸ್ಯೆ ವಿಲ್ಮಾ ಗೊನ್ಸಾಲಿಸ್, ಕೋಶಾಧ್ಯಕ್ಷೆ ಶುಭಮಾಲಿನಿ ಮಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಬೇರೆ ಮಹಿಳೆಯರಿಗೆ ಕೊಡಬಾರದು ಎಂದು ನಮ್ಮ ಉದ್ದೇಶವಲ್ಲ. ಆದರೆ ಅನುಭವಿ ರಾಜಕಾರಣಿ, ಎರಡು ಬಾರಿ ಶಾಸಕರಾಗಿದ್ದ ಅವರು ಜನರ ಸಮಸ್ಯೆಗಳನ್ನು ಅತೀ ಹತ್ತಿರದಿಂದ ಬಲ್ಲವರಾಗಿದ್ದಾರೆ. ಸಾವಿರಾರು ಕೋಟಿ ಅನುದಾನ ತಂದವರು. ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ಸಹಿತ ಹಲವಾರು ಕನಸು ಈಡೇರಿಸಲು ಅವರಿಗೆ ಅವಕಾಶ ನೀಡಬೇಕು ಎಂದ ಅವರು ಮುಂದಿನ ಬಾರಿ ಅವರಿಗೆ ಅವಕಾಶ ಕಡಿಮೆ ಇದೆ. ಹಾಗಾಗಿ ಈ ಬಾರಿ ಅವರಿಗೆ ಅವಕಾಶ ನೀಡಬೇಕು ಈ ಕುರಿತು ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದರು.