ಪುತ್ತೂರು: ಭಾರತೀಯ ಅಂಚೆ ಇಲಾಖೆ ಹಾಗೂ ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಆಶ್ರಯದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೊಂದಣಿ ಶಿಬಿರವು ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯಿತು.
ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ದರ್ಖಾಸು ಉದ್ಘಾಟಿಸಿದರು. ಪುತ್ತೂರು ಪಿ.ಎಲ್.ಡಿ. ಬ್ಯಾಂಕ್ ನಿರ್ದೇಶಕ ದೇವಯ್ಯ ಖಂಡಿಗ, ಗ್ರಾ.ಪಂ ಉಪಾಧ್ಯಕ್ಷ ಗಣೇಶ್ ಉದನಡ್ಕ, ಸದಸ್ಯರಾದ ಸುಲೋಚನಾ ಮಿಯೋಳ್ಪೆ, ತೇಜಕುಮಾರಿ ಉದ್ಲಡ್ಡ, ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕ ಸದಾನಂದ ಮೀಯೊಲ್ಪೆ, ಕಾರ್ಯದರ್ಶಿ ದಮಯಂತಿ ಮುದ್ವ, ಅಂಚೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ದನಂಜಯ ಕೇನಾಜೆ ಸ್ವಾಗತಿಸಿ, ವಂದಿಸಿದರು.