ಪಾಣಾಜೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಪಾಣಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರದಿಂದ ಮೇಲ್ದರ್ಜೆಗೇರಿಸಲ್ಪಟ್ಟ ಸಮುದಾಯ ಆರೋಗ್ಯ ಕೇಂದ್ರ ಪಾಣಾಜೆ ಇದರ ನೂತನ ಕಟ್ಟಡದ ಶಂಕುಸ್ಥಾಪನೆ ಮಾ. 22 ರಂದು ಬೆಳಿಗ್ಗೆ ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಚಿವರಾದ ಎಸ್. ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರಲಿದ್ದಾರೆ.
ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.