ಕೆಮ್ಮಾರ: ಇಲ್ಲಿನ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2022/23 ನೇ ಸಾಲಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮವು ಮಾ.21ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಜಯಶ್ರೀ ಎಮ್ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ. ಮಾತನಾಡಿ ಇಲ್ಲಿ ಕಲಿತ ಶಿಕ್ಷಣ ಮುಂದಿನ ಭವಿಷ್ಯಕ್ಕೆ ಭದ್ರ ಬುನಾದಿ ಆಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಶಿಕ್ಷಕ ವೃಂದದವರು ಮಾತನಾಡಿ ವಿದ್ಯಾರ್ಥಿಗಳನ್ನು ಪ್ರಶಂಶಿಸಿದರು.
ಎಂಟನೇ ತರಗತಿಯ ವಿದ್ಯಾರ್ಥಿಗಳು ನೆನಪಿನ ಕಾಣಿಕೆಯಾಗಿ ಶಾಲೆಗೆ ಕೊಡುಗೆಯನ್ನು ಈ ಸಂದರ್ಭದಲ್ಲಿ ನೀಡಿದರು. ಮುಖ್ಯೋಪಾಧ್ಯಾಯರ ವತಿಯಿಂದ ಹಾಗೂ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಹಿರಿಯರಾದ ಅಬ್ಬಾಸ್ ಹಾಗೂ ಖಾದರ್ ಅಡೆಕ್ಕಲ್ ಅವರು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿದರು.
ಸಮಾರಂಭದಲ್ಲಿ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸಂಮ್ರೀನ ಸ್ವಾಗತಿಸಿದರು, ಮರಿಯಂ ಆಫಿಯ ವಂದಿಸಿದರು. ರಂಶೀನ ಕಾರ್ಯಕ್ರಮವನ್ನು ನಿರೂಪಿಸಿದರು.