ಬಡಗನ್ನೂರಿನ ಮುಡಿಪಿನಡ್ಕ ಗುಡ್ಡೆಗೆ ಬೆಂಕಿ-ನಂದಿಸಲು ಹರಸಾಹಸ

0

ಬಡಗನ್ನೂರು:ಬಿಸಿಲಿನ ತಾಪ ಹೆಚ್ಚುತ್ತಿರುವಂತೆಯೇ ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಿದೆ ಇಂದು ಮಾ.22ರ ಬುಧವಾರ ಬಡಗನ್ನೂರಿನ ಮುಡಿಪಿನಡ್ಕದ ಮೈಮುನಾ ಎಂಬವರಿಗೆ ಸೇರಿದ ಜಾಗದಲ್ಲಿ ಮಧ್ಯಾಹ್ನ ಬೆಂಕಿ ಹತ್ತಿಕೊಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳೊಂದಿಗೆ ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸುಮಾರು 2.30ರ ವೇಳೆಗೆ ಹತ್ತಿಕೊಂಡ ಬೆಂಕಿ ವ್ಯಾಪಕವಾಗಿ ಹರಡಿದ್ದು 3.15ರವರೆಗೂ ಹತೋಟಿಗೆ ಬಂದಿಲ್ಲ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here