ಕಾವು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆರಂಭ-ಧ್ವಜಾರೋಹಣ

0

ಕಾವು: ಕಾವು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ಆರಂಭಗೊಂಡಿದ್ದು ಮಾ.23ರಂದು ಬೆಳಿಗ್ಗೆ ಉಗ್ರಾಣ ತುಂಬಿಸಿ, ಬಲಿ ಹೊರಟು, ಧ್ವಜಾರೋಹಣ ನೆರವೇರಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಪವಿತ್ರ ಪಾಣಿ ನನ್ಯ ಅಚ್ಚುತ ಮೂಡೆತ್ತಾಯ, ಆಡಳಿತ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ, ಸಮಿತಿ ಸದಸ್ಯರುಗಳು, ಪ್ರಧಾನ ಅರ್ಚಕ ಶಿವಪ್ರಸಾದ್ ಕಡಮಣ್ಣಾಯ, ಊರ ಭಕ್ತಾದಿಗಳು ಪಾಲ್ಗೊಂಡಿದ್ದರು.

ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳವರ ನೇತೃತ್ವದಲ್ಲಿ ಮಾ.23ರಿಂದ 27ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

LEAVE A REPLY

Please enter your comment!
Please enter your name here