ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್ ನೂತನ ಕಾರ್ಯಾಲಯ ಮತ್ತು ಭಾರತ್ ನಿರ್ಮಾಣ್ ರಾಜೀವ ಗಾಂಧಿ ಸೇವಾ ಕೇಂದ್ರ ಹಾಗೂ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಮಾ.24 ರಂದು ಬೆಳಿಗ್ಗೆ ನಡೆಯಲಿದೆ.
ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ ಭಂಡಾರಿ ಮತ್ತೀತರರು ಭಾಗವಹಿಸಲಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ.ಡಿ ಅಧ್ಯಕ್ಷತೆ ವಹಿಸಲಿರುವರು ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.