ಬೆಂಗಳೂರು:ಮಾ.24ರಿಂದ ಸಾರಿಗೆ ನೌಕರರು ನಡೆಸಲುದ್ದೇಶಿಸಿದ್ದ ಮುಷ್ಕರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್.ಚಂದ್ರಶೇಖರ್‌ರವರು, ಮಾ.24ರಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು.
ಇದೀಗ ಹೈಕೋರ್ಟ್ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆಯ ಮುಷ್ಕರನ್ನು ಪ್ರಶ್ನಿಸಿ ಹೆಚ್.ಎಂ.ವೆಂಕಟೇಶ್ ಎಂಬವರು ಹೈಕೋರ್ಟ್‌ಗೆ ಪಿಐಎಲ್ ಹಾಕಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ ತಡೆ ನೀಡಿದೆ.