ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳಿಕೆ ಆಗ್ರಹ; ವಿವಿಧ ಸಂಘಟನೆಗಳಿಂದ ಎಲ್ಲಾ ರಾಜಕೀಯ ಪಕ್ಷಗಳ ಕಚೇರಿಗೆ ಭೇಟಿ ಹಕ್ಕೊತ್ತಾಯ ನಿರ್ಣಯ

0
smart

ಪುತ್ತೂರು: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಮಕ್ಕಳ ಹಕ್ಕುಗಳ ಪರವಾಗಿ ವಿವಿಧ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳುವಂತೆ ಮತ್ತು ಮುಂದಿನ ದಿನಗಳಲ್ಲಿ ಅದನ್ನು ಅನುಷ್ಠಾನಗೊಳಿಸುವಂತೆ ಹಕ್ಕೊತ್ತಾಯ ಮಂಂಡಿಸುವ ನಿಟ್ಟಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಕಛೇರಿಗಳಿಗೆ ಭೇಟಿ ನೀಡಿ ಅವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಕ್ಕಳ ಬೇಡಿಕೆಗಳನ್ನು ಅಳವಡಿಸಿಕೊಂಡು ಅವುಗಳನ್ನು ಅನುಷ್ಟಾನಕ್ಕೆ ತರುವಂತೆ ಆಗ್ರಹಿಸಲು ಪುತ್ತೂರಿನಲ್ಲಿ ವಿವಿಧ ಸಂಘಟನೆಗಳ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ (ಸಿ.ಎ.ಸಿ.ಎಲ್-ಕೆ), ಶಿಕ್ಷಣದ ಮೂಲ ಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಪಾಫ್ರೆ) , ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ದಕ್ಷಿಣ ಕನ್ನಡ ಮತ್ತು ಎಸ್. ಡಿ.ಎಂ.ಸಿ ಸಮನ್ವಯ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾ.22ರಂದು ಇಲ್ಲಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here