ಶಾಸಕರ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಮಂಜೂರಾತಿ ಸಭೆ:165 ಕಡತಗಳ ಪರಿಶೀಲನೆ, 24 ಮಂದಿಗೆ 94 ಸಿ ಹಕ್ಕು ಪತ್ರ ವಿತರಣೆ

0

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಮಂಜೂರಾತಿ ಸಭೆಯು ಮಾ.23ರಂದು ಪುತ್ತೂರು ತಾಲೂಕು ಆಡಳಿತ ಸೌಧದ ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಿತು.


ಸುಮಾರು 165 ಅಕ್ರಮ ಸಕ್ರಮ ಮಂಜೂರಾತಿ ಕಡತಗಳನ್ನು ಪರಶೀಲನೆ ಮಾಡಿ ಮಂಜೂರು ಮಾಡುವ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ 24 ಮಂದಿ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿ ತಹಸೀಲ್ದಾರ್ ಶಿವಶಂಕರ್, ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್ ಬಲ್ನಾಡು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here