ಬೊಳುವಾರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಅರ್ಧ ಏಕಾಹ ಭಜನೆ ಆರಂಭ

0

ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಹಿಂದು ಜಾಗರಣ ವೇದಿಕೆ ವತಿಯಿಂದ ಆಶ್ಲೇಷ ಬಲಿ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆಗೆ ಸಂಬಂಧಿಸಿ ಮಾ.24 ರಂದು ಗಣಪತಿ ಹೋಮ ನಡೆದು, ಅರ್ಧ ಏಕಾಹ ಭಜನೆ ಆರಂಭಗೊಂಡಿದೆ.


ವೇ ಮೂ ರಾಜೇಶ್ ಭಟ್ ಅವರು ಗಣಪತಿಹೋಮ ನೆರವೇರಿಸಿ ಬಳಿಕ ಅರ್ಧ ಏಕಾಹ ಭಜನೆಗೆ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆ ಪ್ರಮುಖರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here