5, 8ನೇ ತರಗತಿಯ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ -ಬಿಇಓ

0

ಪುತ್ತೂರು: 5 ಮತ್ತು 8ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. 5 ಮತ್ತು 8ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ, ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಇದು ಕೇವಲ ಮೌಲ್ಯಾಂಕನವಾಗಿರುತ್ತದೆ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿಗಳನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸಲಾಗಿದೆ.

ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. ಪಠ್ಯಪುಸ್ತಕವನ್ನಾಧರಿಸಿ ಮೌಲ್ಯಾಂಕನಕ್ಕೆ ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here