ಮಾ.27: ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡದ ಉದ್ಘಾಟನೆ

0

ಪುತ್ತೂರು: ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನ ಸೇವಾ ಸಂಘ ಮುರ ಇದರ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.27ರಂದು ಬೆಳಿಗ್ಗೆ ಗಂಟೆ 10.45ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕಲ್ಲೆಗ ಬಾಬು ಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರು ನೂತನ ಮೇಲಂಸ್ತಿನ ಕಟ್ಟಡವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್, ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ, ಒಕ್ಕಲಿಗ ಸ್ವ ಸಹಾಯ ಸಂಘದ ಅಧ್ಯಕ್ಷ ಮನೋಹರ್ ಡಿ.ವಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನೀಯರ್ ಪ್ರಮೋದ್ ಕುಮಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಡಳಿತ ಸಮಿತಿ ಕಾರ್ಯದರ್ಶಿ ವೆಂಕಟ್ರಮಣ ಗೌಡ ಕೋಡಿಮೂಲೆ, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ ಮುಂಗ್ಲಿಮನೆ, ಖಜಾಂಚಿ ಕಲ್ಲೇಗ ನಾರಾಯಣ ಗೌಡ ಮುರ, ಸದಸ್ಯ ವಸಂತ ಗೌಡ ನೆಕ್ಕರೆ ಕಬಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here