ನಿಡ್ಪಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯ, ರಾಜೀವ್ ಗಾಂಧಿ ಸೇವಾ ಕೇಂದ್ರ, ವಿವಿಧ ಕಾಮಗಾರಿಗಳ ಉದ್ಘಾಟನೆ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್ ನೂತನ ಕಾರ್ಯಾಲಯ ಮತ್ತು ಭಾರತ್ ನಿರ್ಮಾಣ್ ರಾಜೀವ ಗಾಂಧಿ ಸೇವಾ ಕೇಂದ್ರ ಹಾಗೂ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಮಾ.24 ರಂದು ಪಂಚಾಯತ್ ನಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ರಿಬ್ಬನ್ ಕತ್ತರಿಸಿ ದೀಪ ಬೆಳಗಿಸಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಭಾಭವನ ಉದ್ಘಾಟಿಸಿ ಮಾತನಾಡಿದರು. ತಾ.ಪಂ. ನರೇಗಾದ ಸಹಾಯಕ ನಿರ್ದೇಶಕಿ ಶೈಲಜಾ ಭಟ್ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ.ಡಿ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಕಾಮಗಾರಿಗಳನ್ನು ವಿದ್ಯುನ್ಮಾನದ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಲಾಯಿತು. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯವಾಹಕ ಅಬಿಯಂತರ ರಾಜಾರಾಮ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯವಾಹಕ ಅಭಿಯಂತರ ರಾಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗ್ರಾಮದ ಅಭಿವೃದ್ಧಿಗೆ ಅನುದಾನ ಒದಗಿಸಿದ ಶಾಸಕರನ್ನು ಮತ್ತು ಕರಾವಳಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನಿಲ ತಿಮ್ಮಪ್ಪ ಶೆಟ್ಟಿಯವರನ್ನು ಗ್ರಾಮದ ಪರವಾಗಿ ಗೌರವಿಸಲಾಯಿತು. ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರನ್ನು, ಅಧಿಕಾರಿಗಳನ್ನು ಗೌರವಿಸಲಾಯಿತು. ಅಲ್ಲದೆ ಕೂಟೇಲು ರಸ್ತೆ ನಿರ್ಮಾಣಕ್ಕೆ ಸ್ಥಳ ಬಿಟ್ಟು ಕೊಟ್ಟ ಕೂಟೇಲು ನಿವಾಸಿಗಳಾದ ನಾರಾಯಣ ನಾಯ್ಕ, ಕೃಷ್ಣಪ್ಪ ನಾಯ್ಕ, ಬಾಬು ನಾಯ್ಕ ಮತ್ತು ಆನಂದ ನಾಯ್ಕರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಚೂರಿಪದವು ಅಂಗನವಾಡಿ ಕಾರ್ಯಕರ್ತೆ ಭಾಗೀರಥಿ ಪ್ರಾರ್ಥಿಸಿ, ಪಿಡಿಒ ಸಂಧ್ಯಾಲಕ್ಷ್ಮೀ ಸ್ವಾಗತಿಸಿದರು. ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್ ಪ್ರಸ್ತಾಪಿಸಿದರು. ತಾ.ಪಂ.ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ವಂದಿಸಿದರು.

ಮುರಳೀಕೃಷ್ಣ ಭಟ್ ಮುಂಡೂರು ರಸ್ತೆ ಉದ್ಘಾಟನೆ: ಎಲ್ಲಾ ಕಾಮಗಾರಿಗಳನ್ನು ವಿದ್ಯುನ್ಮಾನದ ಮುಲಕ ಉದ್ಘಾಟಿಸಿದರೂ ಅಭಿಮಾನಿಗಳ ಒತ್ತಾಯದ ಮೇರೆಗೆ ಕೂಟೇಲು ಚಿಕ್ಕೋಡಿ ರಸ್ತೆಗೆ ಮುರಳೀಕೃಷ್ಣ ಭಟ್ ರವರ ಹೆಸರು ನಾಮಕರಣ ಮಾಡಿದ್ದು ಆ ರಸ್ತೆಯನ್ನು ಶಾಸಕರು ಉದ್ಘಾಟಿಸಿ ಆ ರಸ್ತೆಗೆ ಕಾಂಕ್ರೀಟ್ ಮಾಡಲು ಅನುದಾನ ಒದಗಿಸುವುದಾಗಿ ತಿಳಿಸಿದರು. ಚನಿಲ ತಿಮ್ಮಪ್ಪ ಶೆಟ್ಟಿ ತೆಂಗಿನಕಾಯಿ ಹೊಡೆದು ಉದ್ಘಾಟಿಸಿದರು.

LEAVE A REPLY

Please enter your comment!
Please enter your name here