ಪೂರ್ವ ಸಿದ್ಧತೆ ಮಾಡಿಕೊಳ್ಳಿ; ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯಚುನಾವಣಾಧಿಕಾರಿ ಸೂಚನೆ

0

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಸಂಬಂಧಿಸಿ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿ ಕೊಳ್ಳುವಂತೆ ಮುಖ್ಯ ಚುನಾವಣಾ ಅಧಿಕಾರಿಯವರು ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಪತ್ರಮೂಲಕ ತುರ್ತು ಸೂಚನೆ ನೀಡಿದ್ದಾರೆ.ಚುನಾವಣಾ ನೀತಿ ಸಂಹಿತೆ(Code of Conduct) ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿಯವರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಾಲಿ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿರುವುದರಿಂದ ಮೇ ತಿಂಗಳ ಎರಡನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಚುನಾವಣೆಗೆ ಸಂಬಂಧಿಸಿ ಅಭ್ಯರ್ಥಿಗಳ ಆಯ್ಕೆ ವಿಚಾರ ಸೇರಿದಂತೆ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ.ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಲಿದ್ದು ಮುಂದಿನ ವಾರವೇ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

ಮತಕ್ಕಾಗಿ ಆಮಿಷ ಒಡ್ಡುವವರ ವಿರುದ್ಧ ಕ್ರಮಕ್ಕೆ ’ಕಂಟ್ರೋಲ್ ರೂಮ್’ ಸ್ಥಾಪನೆ: ರಾಜಕೀಯ ನಾಯಕರು ಮತಕ್ಕಾಗಿ ಹಣ, ಉಡುಗೊರೆಯ ಆಮಿಷಗಳನ್ನು ಒಡ್ಡುವಂತಹ ಬೆಳವಣಿಗೆಗಳು ಕಂಡು ಬರುತ್ತಿವೆ. ಇಂತಹ ಆಮಿಷಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದ್ದು, ದೂರುಗಳ ಸ್ವೀಕರಿಸಲು ನಿಯಂತ್ರಣ ಕೊಠಡಿಯನ್ನು ತೆರೆದಿದೆ.

2023ರ ಚುನಾವಣೆಯ ನಡವಳಿಕೆಯನ್ನು ಹಾಳುಮಾಡಲು ಬಳಸಲಾಗುವ ನಗದು, ಚಿನ್ನಾಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಸಾಗಣೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇಡುವ ಜವಾಬ್ದಾರಿಯನ್ನು ಆದಾಯ ತೆರಿಗೆ ಇಲಾಖೆಯ ವಿಭಾಗಕ್ಕೆ ಭಾರತೀಯ ಚುನಾವಣಾ ಆಯೋಗಕ್ಕೆ ನೀಡಿದೆ.

ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವ ಜವಾಬ್ದಾರಿ ಹೊತ್ತುಕೊಂಡಿರುವ ಐಟಿ ಇಲಾಖೆಯ ನಿಯಂತ್ರಣ ಕೊಠಡಿ ಮತದಾನ ದಿನಾಂಕದವರೆಗೆ 24*7ರಂತೆ ಕಾರ್ಯ ನಿರ್ವಹಿಸಲಿದೆ. ಯಾವುದೇ ವ್ಯಕ್ತಿ, ಪಕ್ಷ ಉಚಿತ ಉಡುಗೊರೆ, ನಗದು ನೀಡುತ್ತಿರುವುದು ಕಂಡು ಬಂದರೆ, ಟೋಲ್-ಫ್ರೀ ಫೋನ್ ಸಂಖ್ಯೆಗಳನ್ನು ಸಂಪರ್ಕಿಸುವ ಮೂಲಕ ಅಥವಾ ಇ-ಮೇಲ್ ಮೂಲಕ ದೂರುಗಳನ್ನು ನೀಡಬಹುದಾಗಿದೆ. ಮಾಹಿತಿ ಹಂಚಿಕೊಳ್ಳುವ ವ್ಯಕ್ತಿಗಳ ಹೆಸರು ಮತ್ತು ವಿವರಗಳನ್ನು ಗೌಪ್ಯವಾಗಿಡಲಾಗುತ್ತದೆ. ಎಲ್ಲಾ ನಾಗರಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಮತ್ತು ನೈಜ ಮಾಹಿತಿಯನ್ನು ಹಂಚಿಕೊಳ್ಳುವಂತೆ ವಿನಂತಿಸಲಾಗಿದೆ ಎಂದು ಐಟಿ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮತಕ್ಕಾಗಿ ಆಮಿಷ ಒಡ್ಡುವವರ ವಿರುದ್ಧ ಕ್ರಮಕ್ಕೆ ‘ಕಂಟ್ರೋಲ್ ರೂಮ್’ ಸ್ಥಾಪನೆ

ದೂರು ನೀಡುವವರು ಟೋಲ್ ಫ್ರೀ ಸಂಖ್ಯೆ
1800&425 &2115/ 080&22861126, ಫ್ಯಾಕ್ಸ್ ಸಂಖ್ಯೆ 080&22866916, ಮೊಬೈಲ್ ಸಂಖ್ಯೆಗಳು 8277422825/ 8277413614, ಇ-ಮೇಲ್ [email protected] ಮೂಲಕ ದೂರು ನೀಡಬಹುದು

LEAVE A REPLY

Please enter your comment!
Please enter your name here