ನಾಳೆ (ಮಾ.26) ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ

0

ಪುತ್ತೂರು : ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಮತ್ಯ ಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವ ಉದ್ಯೋಗ ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮ ಮಾ.26ರಂದು ಸಂಜೆ ಗಂಟೆ 5.00ಕ್ಕೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಮೈದಾನದಲ್ಲಿ ನಡೆಯಲಿದೆ.

ಭಾರತ ಸರ್ಕಾರದ ಮೀನುಗಾರಿಕೆ, ಪಶು ಸಂಗೋಪನೆ, ಮತ್ತು ಹೈನುಗಾರಿಕೆ ಹಾಗೂ ಮಾಹಿತಿ ಪ್ರಸಾರ ರಾಜ್ಯ ಸಚಿವ ಡಾ|| ಎಲ್. ಮುರುಗನ್ ಲೋಕಾರ್ಪಣೆ ಮಾಡಲಿದ್ದಾರೆ

ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತರಿರುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ರಾಜ್ಯ ಸಭಾ ಸಂಸದ ಡಿ. ವೀರೇಂದ್ರ ಹೆಗಡೆ, ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಯು. ಟಿ. ಖಾದರ್, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ ಯು., ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕ ಶ್ರೀ ಉಮಾನಾಥ ಎ. ಕೋಟ್ಯಾನ್, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಬಿ ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್ ಬೋಜೇ ಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ. ವಿ. ತೀರ್ಥರಾಮ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ದಿ ನಿಗಮ ನಿಯಮಿತ(ಕಿಯೀನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಸರಕಾರದ ಕಾರ್ಯದರ್ಶಿಗಳು, ಪಶುಸಂಗೋಪನಾ ಮತ್ತು ಮೀನುಗಾರಿಕಾ ಇಲಾಖೆ ಸಲ್ಮಾ ಕೆ. ಭಾ.ಆ.ಸೇ, ಜಿಲ್ಲಾಧಿಕಾರಿ ಎಂ. ಆರ್. ರವಿಕುಮಾರ್, ದ.ಕ ಜಿ,.ಪಂ ಮುಖ್ಯ ಕಾರ್ಯನಿರ್ವಕಾಧಿಕಾರಿ ಡಾ. ಕುಮಾರ್, ಭಾ.ಆ.ಸೇ, ಮೀನುಗಾರಿಕಾ ಇಲಾಖೆ ಮೀನುಗಾರಿಕೆ ನಿರ್ದೇಶಕರು ರಾಮಾಚಾರ್ಯ ಪುರಾಣಿಕ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ವಿಕ್ರಂ ಅಮಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here