ಪುತ್ತೂರು, ಉಪ್ಪಿನಂಗಡಿ ಮತ್ತು ಕಡಬ ಘಟಕದ ಗೃಹರಕ್ಷಕರಿಗೆ ವಿಶೇಷ ಚುನಾವಣಾ ಶಿಬಿರ

0

ನಿಷ್ಪಕ್ಷಪಾತ ಚುನಾವಣೆಗೆ ಸಹಕರಿಸಿ : ಡಾ|| ಚೂಂತಾರು

 ಪುತ್ತೂರು : ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ  ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯತೆ ಇರುತ್ತದೆ. ಈ ಕಾರಣದಿಂದ  ಪಾರದರ್ಶಕ ಮತ್ತು  ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆ ಗೃಹರಕ್ಷಕರು ಸೇರಿ ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ ನ್ಯಾಯಯುತವಾಗಿ, ಕಾನೂನು ಬದ್ಧವಾಗಿ ನಡೆಸಲು ಬದ್ಧರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ  ಗೃಹರಕ್ಷಕರಿಗೆ ಚುನಾವಣೆ ಕರ್ತವ್ಯ ಅತ್ಯಂತ ಮಹತ್ವದ್ದಾಗಿರುತ್ತದೆ. ಎಲ್ಲಾ ಗೃಹರಕ್ಷಕರು ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸಬೇಕಾಗಿದೆ ಎಂದು ದ.ಕ. ಜಿಲ್ಲಾ ಸಮಾದೇಷ್ಟರಾದ  ಡಾ|| ಮುರಲೀಮೋಹನ್ ಚೂಂತಾರು ನುಡಿದರು.

ಪುತ್ತೂರು ನಗರದ ನಟರಾಜ ಸಭಾಂಗಣದಲ್ಲಿ ಪುತ್ತೂರು, ಉಪ್ಪಿನಂಗಡಿ ಮತ್ತು ಕಡಬ ಘಟಕದ ಗೃಹರಕ್ಷಕರಿಗೆ ವಿಶೇಷ ಚುನಾವಣಾ ಶಿಬಿರ ಮಾ.25,26 ರಂದು ಜರುಗಿತು.


ತರಬೇತಿಯನ್ನು ಜಿಲ್ಲಾ ಗೃಹರಕ್ಷಕ ದಳ ಮಂಡ್ಯ ಜಿಲ್ಲೆಯ ಸಹಾಯಕ ಭೋಧಕರಾದ ಶರತ್ ಎಸ್.ಜೆ. ನಡೆಸಿಕೊಟ್ಟರು.

ಪುತ್ತೂರು ಘಟಕದ ಘಟಕಾಧಿಕಾರಿ ಅಭಿಮನ್ಯು ರೈ, ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ದಿನೇಶ್,ಕಡಬ ಘಟಕದ ಘಟಕಾಧಿಕಾರಿ ತೀರ್ಥೆಶ, ಪುತ್ತೂರು ಘಟಕದ ಜಗನ್ನಾಥ್, ಸುದರ್ಶನ್ ಜೈನ್ ಇವರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here