ಪಾಲ್ತಾಡು: ವಿಷ್ಣುಮೂರ್ತಿ ದೈವದ ಒತ್ತೆಕೋಲ

0

ಸವಣೂರು : ಕೊಳ್ತಿಗೆ ಗ್ರಾಮದ ಪಾಲ್ತಾಡು ನಡುಮನೆ ವಿಷ್ಣುಮೂರ್ತಿ ದೈವಸ್ಥಾನದಲ್ಲಿ  ವರ್ಷಾವಧಿ ಒತ್ತೆಕೋಲವು ಮಾ.24 ಹಾಗೂ 25 ರಂದು ನಡೆಯಿತು.

ಕಾರ್ಯಕ್ರಮದಲ್ಲಿ  ಮಾ.24ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ದಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು. ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಅನ್ನಸಂತರ್ಪಣೆಯ ಬಳಿಕ ಕುಳಿಚಟ್ಟು ನಡೆಯಿತು. ನಂತರ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ಮಾ.25ರಂದು ಬೆಳಿಗ್ಗೆ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ, ಮಾರಿಕಲ,ಹರಿಕೆ, ಪ್ರಸಾದ ವಿತರಣೆ ನಡೆಯಿತು. ಸಂಜೆ ಗುಳಿಗನ ಕಟ್ಟೆಯಲ್ಲಿ ಮುಳ್ಳುಗುಳಿಗನ ಕೋಲ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ನವೀನಾಥ ರೈ ಪಾಲ್ತಾಡು ನಡುಮನೆ, ಪಿ.ನಾರಾಯಣ ರೈ ಪಾಲ್ತಾಡು, ವಿಲಾಸ್ ರೈ ಪಾಲ್ತಾಡು, ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ವಿನೋದ್ ರೈ ಪಾಲ್ತಾಡು, ಶೀಲಾವತಿ ರೈ ಪಾಲ್ತಾಡು ನಡುಮನೆ, ದೈವದ ಪರಿಚಾರಕರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

5 ಸಾವಿರಕ್ಕೂ ಅಧಿಕ ಮಂದಿಗೆ  ಒತ್ತೆಕೋಲದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here