ಕೆಯ್ಯೂರು: ಕೆಯ್ಯೂರು ಗ್ರಾಮದ ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವಿಯ ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಮಾ.26ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಶ್ರೀ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಮಹೋತ್ಸವ, ವಸಂತ ಕಟ್ಟೆ ಪೂಜೆ ಬಳಿಕ “ಕೆಯ್ಯೂರು ಬೆಡಿ” ಎಂದೇ ಪ್ರಸಿದ್ಧಿ ಪಡೆದು ಕೊಂಡಿರುವ ಸುಡುಮದ್ದು ಪ್ರದರ್ಶನ ನಡೆಯಿತು.
ಮಾ.27ರಂದು ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಕೆಯ್ಯೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಶಿಧರ ರಾವ್ ಬೊಳಿಕಲ, ಸಮಿತಿ ಸದಸ್ಯರುಗಳು, ಜೀರ್ಣೋದ್ಧಾರ ಸಮಿತಿ ಅದ್ಯಕ್ಷ ಎ.ಕೆ.ಜಯರಾಮ ರೈ ಕೆಯ್ಯೂರು, ವ್ಯವಸ್ಥಾಪನಾ ಸಮಿತಿ ಮಾಜಿ ಅದ್ಯಕ್ಷರು, ಸಮಿತಿ ಸದಸ್ಯರುಗಳು, ಸಹಕರಿಸುವ ಸಂಘ ಸಂಸ್ಥೆಗಳು, ಊರ ಹತ್ತು ಗ್ರಾಮಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.
ಮಾ.28ರಂದು ಬೆಳಿಗ್ಗೆ ಉಳ್ಳಾಕುಲು ನೇಮ, ವರ್ಣರ ಪಂಜುರ್ಲಿ, ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ನೇಮ ನಡೆದು, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಕುಪ್ಪೆಪಂಜುರ್ಲಿ, ಗುಳಿಗ ದೈವದ ನೇಮ ನಡೆದು ರಾತ್ರಿ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.