ಕಾಪಿನಬಾಗಿಲು: ಅಕ್ರಮ ಮದ್ಯ ಮಾರಾಟ; ಸ್ಥಳಕ್ಕೆ ಪೊಲೀಸ್ ದಾಳಿ-ಮದ್ಯ ವಶ, ಆರೋಪಿ ಸೆರೆ

0

ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಪರವಾನಿಗೆ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಮಾ.26ರಂದು ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಮೂಡಬೈಲು ನಿವಾಸಿ ಅಂಬೋಡಿ(51 ವ.) ಬಂಧಿತ ಆರೋಪಿ. ಈತ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ ಸುಧಾಕರ ತೋನ್ಸೆ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಅಂದಾಜು 3,360 ರೂ.ಮೌಲ್ಯದ 8.640 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 32, 34 ಕೆಇ ಆಕ್ಟ್ ನಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here