ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಳದಲ್ಲಿ ಪ್ರತಿಷ್ಟಾ ಮಹೋತ್ಸವ

0

ರಾಮಕುಂಜ: ಕಡಬ ತಾಲೂಕಿನ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವರ ಪ್ರತಿಷ್ಟಾ ಮಹೋತ್ಸವ ಮಾ.23ರಂದು ನಡೆಯಿತು.


ಬೆಳಿಗ್ಗೆ ಗಣಪತಿ ಹೋಮ, ಪಂಚವಿಂಶತಿ ಕಲಶಾಭಿಷೇಕ, ಶ್ರೀ ನಾಗದೇವರಿಗೆ ಆಶ್ಲೇಷ ಬಲಿ, ಕಲಶಾಭಿಷೇಕ, ನಾಗತಂಬಿಲ, ದೈವಗಳ ಸನ್ನಿಧಿಯಲ್ಲಿ ಕಲಶಾಭಿಷೇಕ, ತಂಬಿಲ , ಸಾರ್ವಜನಿಕ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಸದಾಶಿವ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.


ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ದೇವಸ್ಥಾನದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯಧುಶ್ರೀ ಆನೆಗುಂಡಿ, ಸದಸ್ಯರಾದ ವಿನಯ ಕುಮಾರ್ ರೈ ಕೊಯಿಲಪಟ್ಟೆ, ಶ್ರೀರಾಮ ಕೆಮ್ಮಾರ, ಸಂಜೀವ ಗೌಡ ಕೊನೆಮಜಲು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಉತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here