ಪುತ್ತೂರು: ಅರಿಯಡ್ಕ ಗ್ರಾಮದ ಮಾಡ್ನೂರು ತೋಟದ ಮೂಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದ್ದು ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು.
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆಸ್ಪತ್ರೆಗೆ ಭೇಟಿನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಆರ್ಥಿಕ ಸಹಾಯವನ್ನು ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮೃತ ಯುವಕ ದಿನೇಶ್‌ರವರ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.