ಪುತ್ತೂರು: ರಾಜ್ಯ ಸರಕಾರ ಕೊಡಮಾಡುವ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ಒಳಮೊಗ್ರು ಗ್ರಾಮ ಪಂಚಾಯತ್ನ ಆಡಳಿತ ಮಂಡಳಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಪುರಸ್ಕಾರ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿ, ಸದಸ್ಯರುಗಳಾದ ಮಹೇಶ್ ರೈ ಕೇರಿ, ಪ್ರದೀಪ್, ರೇಖಾ, ಶಾರದಾ, ನಳಿನಾಕ್ಷಿ, ವನಿತಾ ಉಪಸ್ಥಿತರಿದ್ದರು.