ಪುತ್ತೂರು: ಹನುಮಗಿರಿ ಶ್ರೀ ಕ್ಷೇತ್ರದಲ್ಲಿ ಶ್ರೀರಾಮ ನವಮಿ ಸಂಭ್ರಮ ಮಾ.30 ರಂದು ನಡೆಯಲಿದೆ. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಿಗ್ಗೆ ಶ್ರೀ ಕೋದಂಡರಾಮ ದೇವರಿಗೆ ಕಲಶಾಭಿಷೇಕ ನಡೆದು ಮಹಾಪೂಜೆ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಭಜನೆ, ವಿಶೇಷ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಸ್ವಾಮಿಯ ಶ್ರೀ ಕೋದಂಡರಾಮ ದೇವರ ಭೇಟಿ ಬಳಿಕ ರಂಗಪೂಜೆ ನಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಮಹಾಪೋಷಕರಾದ ಕೆ.ಮಹಾಬಲೇಶ್ವರ ಭಟ್ ಹಾಗೂ ಧರ್ಮಶ್ರೀ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.