ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಡುಬೆಟ್ಟು ಕಾರ್ಯಕ್ಷೇತ್ರದ ರಾಮನಗರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಬಿಎಂಸಿ ಕಟ್ಟಡ ರಚನೆಗೆ 1ಲಕ್ಷ ರೂ.ಅನುದಾನದ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧ. ಗ್ರಾ.ಯೋಜನೆಯ ಕಡಬ ತಾಲೂಕಿನ ಯೋಜನಾಧಿಕಾರಿ ಮೇದಪ್ಪ ಎನ್.ಅವರು ಸಮಿತಿಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಜಾನ್ ಮೊಂತೆರ, ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ, ರಾಮನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ, ಕಾರ್ಯದರ್ಶಿ ಕಮಲ, ಸಿಬ್ಬಂದಿ ವರ್ಗದವರು, ವಲಯದ ಮೇಲ್ವಿಚಾರಕ ವಿಜೇಶ್ ಜೈನ್, ಸೇವಾ ಪ್ರತಿನಿಧಿ ಮೋಹಿನಿ, ಒಕ್ಕೂಟದ ಪದಾಧಿಕಾರಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.