ದೋಳ್ಪಾಡಿ ಇಡ್ಯಡ್ಕದಲ್ಲಿ ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು ; ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ

0

ಕಾಣಿಯೂರು: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ತಾಲೂಕಿನ ಕಾಣಿಯೂರು ಸಮೀಪ ದೋಳ್ಪಾಡಿ ಗ್ರಾಮದ ಇಡ್ಯಡ್ಕದಿಂದ ವರದಿಯಾಗಿದೆ.

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದ್ದಾರೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೋತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೃದಯಾಘಾತಕ್ಕೆ ಒಳಗಾಗಿರಬಹುದೆಂದು ಅಂದಾಜಿಸಲಾಗಿದೆ. ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here