ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ, ಪುಷ್ಪರಥ ಸಮರ್ಪಣೆ

0

ಪುತ್ತೂರು: ಮಾಂಗಲ್ಯ ವರಪ್ರದಾಯನಾಗಿರುವ ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ, ದೇವರಿಗೆ ನೂತನವಾಗಿ ನಿರ್ಮಾಣಗೊಂಡಿರುವ ಪುಷ್ಪರಥದ ಸಮರ್ಪಣೆ ಮಾ.30ರಂದು ನೆರವೇರಿತು.

ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಲಕ್ಷ್ಮೀಶ ತಂರ್ತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ವೈದಿಕ, ತಾಂತ್ರಿಕ ವಿಧಿ ವಿಧಾನಗಳಿಗೆ ಮಾ.25ರಂದು ಚಾಲನೆ ದೊರೆತಿದೆ. ಕ್ಷೇತ್ರದಲ್ಲಿ ನಿರಂತರವಾಗಿ ಆರು ದಿನಗಳ ಕಾಲ ವಿವಿಧ ತಾಂತ್ರಿಕ ವೈದಿಕ ವಿಧಿವಿಧಾನಗಳು ನಡೆದು ಮಾ.30ರಂದು ಮುಂಜಾನೆ 108 ಕಾಯಿ ಮಹಾಗಣಪತಿಹೋಮ, ದೇವರಿಗೆ ಅಷ್ಟಬಂಧಕ್ರಿಯೆ ಹಾಗೂ ಬ್ರಹ್ಮಕಲಶಾಭಿಷೇಕ ನೆರವೇರಿತು.

ನಂತರ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರಿಂದ ದೇವರಿಗೆ ನೂತನ ಪುಷ್ಪರಥದ ಸಮರ್ಪಣೆ ನೆರವೇರಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.

LEAVE A REPLY

Please enter your comment!
Please enter your name here