ಉಪ್ಪಿನಂಗಡಿ: 37 ವರ್ಷಗಳ ಕಾಲ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ಮಾ.31ರಂದು ವಯೋ ನಿವೃತ್ತಿ ಹೊಂದಿದ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕೊಕ್ಕಡದ ಶ್ರೀಮತಿ ಡೈಸಿ ವಿ.ಟಿ. ಅವರಿಗೆ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣಾನಂದ, ದಂತ ವೈದ್ಯಾಧಿಕಾರಿ ಡಾ. ಮುಸಾಕೀರ್ ಹುಸೈನ್ ಹಾಗೂ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.