ಪುತ್ತೂರು: ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕನ್ಯಾನದ ಆರೋಪಿಯನ್ನು ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಷರೀಫ್ ಎಂಬವರ ಮಗ ಮಹಮ್ಮದ್ ತೌಪೀರ್ ಬಂಧಿತ ಆರೋಪಿ.
ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.