ಪುತ್ತೂರು:ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿರುವ ಮೇ 10 ಮತ್ತು ಮತ ಎಣಿಕೆ ನಡೆಯಲಿರುವ ಮೇ 13ರಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮತದಾನ ನಡೆಯುವ ದಿನ ಮೇ 10 ಹಾಗೂ ಮತಗಳ ಎಣಿಕೆಯ ದಿನ ಮೇ13ರಂದು ರಾಜ್ಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಿದೆ. ಹೊಟೇಲ್, ರೆಸ್ಟೊರೆಂಟ್, ಮದ್ಯದಂಗಡಿ, ಪಂಚತಾರಾ ಹೊಟೇಲ್, ಸಗಟು ವ್ಯಾಪಾರ ಸೇರಿದಂತೆ ಎಲ್ಲಿಯೂ ಮದ್ಯ ಮಾರಾಟ ಮಾಡುವಂತಿಲ್ಲ.