ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಿಕ್ಕಮುಡ್ನೂರು ಗ್ರಾಮದ ಅಡ್ಲಿಮಜಲು ಎಂಬಲ್ಲಿ ಕಾರ್ಯಾಚರಿಸುತ್ತಿರುವ ಸಿಮೆಂಟ್ ಪ್ರೊಡಕ್ಟ್ ಘಟಕದಿಂದ ಸಾರ್ವಜನಿಕ ರಸ್ತೆ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಚಿಕ್ಕಮುಡ್ನೂರು ಕಲಿಯುಗ ಸೇವಾ ಸಮಿತಿಯಿಂದ ಶಾಸಕರಿಗೆ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಲಾಗಿದೆ.
ಸಿಮೆಂಟ್ ಪ್ರೊಡಕ್ಟ್ ಘಟಕದಲ್ಲಿ ಉತ್ಪಾದಿಸಲಾಗುತ್ತಿರುವ ಸಿಮೆಂಟ್ ಇಟ್ಟಿಗೆ, ಇಂಟರ್‌ಲಾಕ್‌ಗಳನ್ನು ಜಿಲ್ಲಾ ಪಂಚಾಯತ್ ರಸ್ತೆಯ ಬದಿಯಲ್ಲಿ ದಾಸ್ತಾನು ಮಾಡಲಾಗುತ್ತಿದೆ. ರಸ್ತೆ ಡಾಮಾರಿನ ಅಂಚಿನ ತನಕ ಈ ಪ್ರೊಡಕ್ಟ್ ಗಳನ್ನು ಇರಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ರಸ್ತೆಯಲ್ಲಿ ಸಂಚಾರಕ್ಕೆ ಸಮಸ್ಯೆಗಳು ಉಂಟಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದ್ದು. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.