ರಾಮಕುಂಜ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಿದ್ದ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈಯವರು 5 ಚಿನ್ನದ ಪದಕ ಪಡೆದುಕೊಂಡು ಮಿಂಚಿದ್ದಾರೆ.
ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, 100ಮೀ ಹರ್ಡಲ್ಸ್ ಹಾಗೂ 4*100ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ಕರ್ನಾಟಕ ರಾಜ್ಯಕ್ಕೆ 5 ಚಿನ್ನದ ಪದಕವನ್ನು ತಂದು ಕೊಟ್ಟ ಹೆಮ್ಮೆಯ ಕ್ರೀಡಾಪಟುವಾಗಿ ಮಿಂಚಿದ್ದಾರೆ. ಮೇ ತಿಂಗಳ ಕೊನೆಯ ವಾರ ಸಿಂಗಾಪುರದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಇವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಪ್ರಫುಲ್ಲಾ ರೈಯವರು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ, ರಾಮಕುಂಜ ಗ್ರಾಮದ ಕೇಳ್ಕ ನಿವಾಸಿ ಲೋಕನಾಥ್ ರೈಯವರ ಪತ್ನಿ.