ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣಾ ಕಾರ್ಯಕ್ರಮ

0

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಮಂಗಳೂರು ಪೊಲೀಸ್ ಕಮಿಷನರೇಟ್ ಹಾಗೂ 7 ನೇ ಪಡೆ ಕೆಎಸ್ಆರ್ ಪಿ, ಮಂಗಳೂರು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾಯಿತು .

ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ನಿರೀಕ್ಷಕ ರಾಘವ ಎಸ್ ಪಡೀಲ್ ಆಗಮಿಸಿ ಗೌರವ ವಂದನೆ ಸ್ವೀಕರಿಸಿದರು.

ಪಶ್ಚಿಮ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ. ಚಂದ್ರಗುಪ್ತ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ,ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಅಧೀಕ್ಷಕ ಡಾ|| ವಿಕ್ರಮ್ ಅಮಟೆ ಹಾಗೂ ಇತರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here