ಸವಣೂರಿನ ಪುಷ್ಪಾವತಿ ಕೇಕುಡೆ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ

0

ಪುತ್ತೂರು: ಕರ್ನಾಟಕ ಮಾಸ್ಟರ್ಸ್ ಆಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾ. 27 ರಿಂದ 30ರವರೆಗೆ ನಡೆದ 42ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಸವಣೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷೆ ಪುಷ್ಪಾವತಿ ಕೇಕುಡೆಯವರು 40ರ ವಯೋಮಾನದ 1500ಮೀ, 400ಮೀ ಹಾಗೂ 4×400 ರಿಲೇಯಲ್ಲಿ ಕಂಚಿನ ಪದಕ ಗಳಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಅರ್ಹತೆ ಪಡೆದಿರುತ್ತಾರೆ. ಇವರು ಸವಣೂರು ಕೇಕುಡೆ ನಿವಾಸಿ ಆನಂದ ಪೂಜಾರಿ ಇವರ ಪತ್ನಿಯಾಗಿದ್ದಾರೆ.

LEAVE A REPLY

Please enter your comment!
Please enter your name here