ಕಾಣಿಯೂರು : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 42ನೇ ನ್ಯಾಷನಲ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕಿ ವನಿತಾ ಕಲ್ಮಡ್ಕ ಇವರು ಗುಂಡೆಸೆತ ಹಾಗೂ ಹ್ಯಾಮರ್ ತ್ರೋ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೂಡಬಿದ್ರೆ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಎಂ. ಎಚ್. ಆರ್. ಡಿ ಪದವಿ ಪಡೆದಿರುವ ಇವರು ನಿರಂತರ ಒಂಬತ್ತು ವರ್ಷಗಳ ಕಾಲ ಕಬಡ್ಡಿ ಪಂದ್ಯಾಟಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಪ್ರಸ್ತುತ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆಸಲ್ಲಿಸುತ್ತಿರುವ ಇವರು ಯುವ ಕ್ರೀಡಾಪಟುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಬಡ್ಡಿ ತರಬೇತಿ ನೀಡುವುದರೊಂದಿಗೆ ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.