ಆಸ್ತಿ ತೆರಿಗೆ ಏ.30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ-ನಗರಸಭೆ ಪ್ರಕಟಣೆ

0

ಪುತ್ತೂರು:ನಗರಸಭೆ ವ್ಯಾಪ್ತಿಗೆ ಒಳಪಡುವ ಕಟ್ಟಡ, ನಿವೇಶನಗಳ ಮಾಲೀಕರುಗಳು ತಮ್ಮ ಅಸ್ತಿಗೆ ಸಂಬಂಧಿಸಿ 2023-24ನೇ ಸಾಲಿನ ಆಸ್ತಿ ತೆರಿಗೆಯನ್ನು ಏ.30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿಯನ್ನು ನೀಡಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ ಮತ್ತು ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದರೆ ಯಾವುದೇ ದಂಡವಿರುವುದಿಲ್ಲ. ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆದಾರರು ಹಿಂದಿನ ವರ್ಷಗಳ ಕಂದಾಯಗಳಿಗೆ ದಂಡ ಸಮೇತ ಕಡ್ಡಾಯವಾಗಿ ಆಸ್ತಿ ತೆರಿಗೆ ಪಾವತಿಸಿ, ಸ್ವಯಂ ಘೋಷಿತ ಆಸ್ತಿ ತೆರಿಗೆಯ ಘೋಷಣೆಯನ್ನು ಮಾಡಿಕೊಳ್ಳಬೇಕು. ಉದ್ದಿಮೆ ಪರವಾನಿಗೆ ಮತ್ತು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿರುವವರು ಕಂದಾಯವನ್ನು ಕಡ್ಡಾಯವಾಗಿ ಪಾವತಿಸಬೇಕು.

ತಪ್ಪಿದಲ್ಲಿ ಕರ್ನಾಟಕ ಪುರಸಭೆ ಅಧಿನಿಯಮ 1964 ನಿಯಮ 115 ರೀತ್ಯಾ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಆಸ್ತಿಯ ಮಾಲಿಕರು ಯಾವುದೇ ಕಾನೂನು ಕ್ರಮಕ್ಕೆ ಅವಕಾಶ ಕೊಡದೇ ಸ್ವಯಂ ಪ್ರೇರಿತವಾಗಿ ಕಂದಾಯವನ್ನು ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here