ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಎಪಿಎಂಸಿ ರಸ್ತೆಯ ಮೇಘನಗರ ಎಂಬಲ್ಲಿ ಸುಮಾರು 3 ತಿಂಗಳಿನಿಂದ ಕುಡಿಯಲು ನೀರಿಲ್ಲದೆ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರು ವ್ಯಕ್ತವಾಗಿದೆ.
ಮೇಘನಗರದಲ್ಲಿ ಹಲವು ಮನೆಗಳು ಇದ್ದು ನೀರಿಗಾಗಿ ಪರದಾಡಬೇಕಾದ ಸ್ಥಿತಿ ಬಂದಿದೆ. ಈ ಸಮಸ್ಯೆ ಬಗ್ಗೆ ನಗರಸಭೆಗೆ ಹಲವು ಬಾರಿ ತಿಳಿಸಿದರೂ ನಗರಸಭೆಯಿಂದ ಯಾವುದೇ ಸ್ಪಂದನೆ ಇಲ್ಲ ಎಂದು ಆರೋಪಿಸಿರುವ ಸ್ಥಳೀಯರು ಸಂಬಂಧಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದ್ದಾರೆ.