ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ ವಿಭಾಗದ ಪದವಿ ಪ್ರಧಾನ ಸಮಾರಂಭ ಮಾ.31ರಂದು ನಡೆಯಿತು. ಯು ಕೆ ಜಿ ವಿದ್ಯಾರ್ಥಿಗಳು ಪಥಸಂಚಲನದನದೊಂದಿಗೆ ಸಭಾಂಗಣಕ್ಕೆ ಆಗಮಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರು ಮತ್ತು ಕಾರ್ಯಕ್ರಮದ ಅಧ್ಯಕ್ಷರಾದ ರೆ| ಫಾ| ಅರುಣ್ ವಿಲ್ಸನ್ ಲೋಬೊ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.
ಪದವಿ ಪ್ರಧಾನ ಮಾಡಿದ ಸಂಚಾಲಕರು ಪದವಿ ಪ್ರಧಾನ ಮಾಡುವುದರ ಉದ್ದೇಶ ಜೀವನದಲ್ಲಿ ಉತ್ತಮ ವ್ಯಕ್ತಿಗಳಾಗಲಿ, ವಿದ್ಯಾರ್ಥಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರನ್ನು ಪ್ರೀತಿಸಿ, ಪ್ರೋತ್ಸಾಹಿಸಿ, ಅಭಿನಂದಿಸಿ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಉಷಾ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಇಂದು ಅತ್ಯುತ್ತಮವಾದ ದಿನ. ಮಕ್ಕಳಿಗೆ ಪದವಿ ಪ್ರಧಾನ ಮಾಡುವುದು ಮಕ್ಕಳು ಮುಂದಿನ ತರಗತಿಗೆ ಹೋಗಲು ಅರ್ಹರು, ಹಾಗೆಯೇ ಮಕ್ಕಳಲ್ಲಿ ಗೌರವ, ಆತ್ಮವಿಶ್ವಾಸ, ಹೆಚ್ಚುತ್ತದೆ ಎಂದರು.
ವೇದಿಕೆಯಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರು ರೆ.ಫಾ.ಅಮಿತ್ ಪ್ರಕಾಶ್ ರೋಡ್ರಿಗಸ್, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಡೆನ್ನಿಸ್ ಫೆರ್ನಾಂಡಿಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಸೀತಾರಾಮ ಪೊಸವಳಿಕೆ, ಹಾಗೂ ಸಂಸ್ಥೆಯ ಎಲ್ಲಾ ಮುಖ್ಯ ಶಿಕ್ಷಕರಾದ ಶ ಕಿರಣ್, ಶ ಶ್ರೀಲತಾ, ಸಿಸ್ಟರ್ ಹಿಲ್ಡಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವನ್ನು ಶಿಕ್ಷಕಿ ಸಾರ ನಿರೂಪಿಸಿದರು,
ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ರೆ.ಫಾ.ಅಮಿತ್ ಪ್ರಕಾಶ್ ರೋಡ್ರಿಗಸ್ ಸ್ವಾಗತಿಸಿ, ಶಿಕ್ಷಕಿ ಸುನಿತಾ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಮಕ್ಕಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ನಡೆಯಿತು.