ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 13ನೇ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು: ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿಯ ವತಿಯಿಂದ ಸಂಪ್ಯ ನವಚೇತನ ಯುವಕ ಮಂಡಲ ಹಾಗೂ ಮುಕ್ರಂಪಾಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಸಹಕಾರದೊಂದಿಗೆ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯುವ ಉಚಿತ ವೈದ್ಯಕೀಯ ಶಿಬಿರದ 13 ನೇ ತಿಂಗಳ ವೈದ್ಯಕೀಯ ಶಿಬಿರವು ಏ.2ರಂದು ನೆರವೇರಿತು.
ಶಿಬಿರವನ್ನು ಬಂಗಾರಡ್ಕ ವಿಶ್ವೇಶ್ವರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮನುಷ್ಯ ತಾನು ಸಂಪಾದಿಸಿದ ವಿದ್ಯೆ, ಜ್ಞಾನ ಹಾಗೂ ಸಂಪತ್ತನ್ನು ಸಮಾಜಕ್ಕೆ ದಾರೆಯೆರುವುದೇ ದೊಡ್ಡ ಸಮಾಜ ಸೇವೆಯಾಗಿದೆ. ಅಂತಹ ವ್ಯಕ್ತಿಗಳೇ ಸಮಾಜದ ಯಶಸ್ಸಿ ನಪುರುಷರು. ಇದಕ್ಕೆ ಸುರೇಶ್ ಪುತ್ತೂರಾಯರವರು ಉದಾಹರಣೆ ಎಂದರು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ರಕ್ಷಾ ಸಮಿತಿ ಗೌರವ ಸಲಹೆಗಾರ ಶ್ರೀಕೃಷ್ಣ ಭಟ್, ಸಂಪ್ಯ ನವಚೇತನಾ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್. ಹಾಗೂ ಮುಕ್ರಂಪಾಡಿ ಶ್ರೀಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಸೋಮಶೇಖರ ರೈ ಇಳಂತಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸನ್ಮಾನ:
ಶಿಬಿರದ ಅನ್ನದಾನದ ಪ್ರಾಯೋಜಕರು, ಬ್ಯಾಂಕ್ ಆಫ್ ಬರೋಡಾದ ಪೆರ್ನೆ ಶಾಖೆಯ ಸಹಾಯಕ ವ್ಯವಸ್ಥಾಪಕ ವೇಣುಗೋಪಾಲ ಶೆಟ್ಟಿ ಸಂಪ್ಯರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಇಳಂತಾಜೆ ಸ್ವಾಗತಿಸಿದರು. ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ವಂದಿಸಿ, ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು.
ಉಚಿತ ವೈದ್ಯಕೀಯ ಶಿಬಿರದಲ್ಲಿ ಕೀಲು ಮತ್ತು ಎಲುಬು ತಪಾಸಣೆ, ಇ.ಎನ್.ಟಿ., ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆಗಳು ಹಾಗೂ ಉಚಿತ ಔಷಧಿಗಳನ್ನು ವಿತರಿಸಲಾಯಿತು, ವೈದ್ಯಕೀಯ ತಜ್ಷ ಡಾ.ಸುರೇಶ್ ಪುತ್ತೂರಾಯ ತಜ್ಞ ವೈದ್ಯರು, ಕೀಲು ಮತ್ತು ಎಲುಬು ತಜ್ಞ ಡಾ. ಸಚಿನ್ ಶಂಕರ್ ಹಾರಕೆರೆ, ಇಎನ್‌ಟಿ ತಜ್ಞೆ ಡಾ. ಅರ್ಚನಾ, ಆಯುರ್ವೇದ ತಜ್ಞರಾದ ಡಾ. ವೇಣು ಗೋಪಾಲ್, ಡಾ. ಸಾಯಿ ಪ್ರಕಾಶ್, ಡಾ. ದೀಕ್ಷಾ ಶಿಬಿರವನ್ನು ನಡೆಸಿಕೊಟ್ಟರು.


ನವಚೇತನ ಯುವಕ ಮಂಡಲ ಸಂಪ್ಯ, ಸತ್ಯನಾರಾಯಣ ಪೂಜಾ ಸಮಿತಿ ಮುಕ್ರಂಪಾಡಿ, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ, ಹಾಗೂ ಹಲವು ಔಷಧಿ ಕಂಪೆನಿಗಳು ಶಿಬಿರದಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here