ಪುತ್ತೂರು: ಇಲ್ಲಿನ ಪ್ರತಿಷ್ಠಿತ ರಾಜಕಾರಣಿಯೋರ್ವರೊಂದಿಗೆ ಮಹಿಳೆಯೊಬ್ಬರು ಆತ್ಮೀಯವಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ನನ್ನ ಹಾಗೂ ರಾಜಕಾರಣಿಯ ವರ್ಚಸ್ಸಿಗೆ ಧಕ್ಕೆ ತರಲು ನನ್ನ ಫೋಟೋಗಳನ್ನು ಎಡಿಟ್ ಮಾಡಿ ಬಳಸಿಕೊಂಡಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಮಹಿಳೆಯು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಮಹಿಳೆಯು ದೂರು ನೀಡಿದ್ದು ನನ್ನ ಫೋಟೋಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ದುರ್ಬಳಕೆ ಮಾಡಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ದೂರಿನಲ್ಲಿ ಕೋರಿದ್ದಾರೆ.
ಪುತ್ತೂರಿನ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಧಕ್ಕೆ ತರುವ ಸಾಧ್ಯತೆ ಎದುರಾಗಿದೆ.