ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಆರಂಭ

0

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಎ.7ರ ವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪ್ರಥಮ ದಿನವಾದ ಎ.5ರಂದು ಬೆಳಗ್ಗೆ ಗಣಪತಿಹೋಮ, ಸೀಯಾಳಾಭಿಷೇಕ, ಕಲಶಾಭಿಷೇಕ, ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸಾಯಂಕಾಲ 6ಗಂಟೆಯಿಂದ ಕೊಡಿಪಾಡಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾತ್ರಿ 7ಕ್ಕೆ ರಂಗಪೂಜೆ, ನಂತರ ಬಲಿಹೊರಟು ಶ್ರೀದೇವರ ಭೂತಬಲಿ ಉತ್ಸವ, ಶ್ರೀದೇವರ ಉತ್ಸವ, ಪಲ್ಲಕಿ ಉತ್ಸವ, ನೃತ್ಯಬಲಿ, ಕಟ್ಟೆಪೂಜೆ ಬಳಿಕ ರಾತ್ರಿ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here