ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ; ಪುತ್ತೂರು ಕ್ಷೇತ್ರದ ಹೆಸರು ಇನ್ನೂ ನಿಗೂಢ

0

ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಎ.6ರಂದು ಬಿಡುಗಡೆಗೊಂಡಿದ್ದು ಪುತ್ತೂರು ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎ.6ರಂದು 42 ಮಂದಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಿದೆ. ಇದರಲ್ಲಿ ದ.ಕ ಜಿಲ್ಲೆಯ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗು ಪುತ್ತೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿಲ್ಲ. ಈ ಮೂಲಕ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುತೂಹಲ ಕಾಯ್ದುಕೊಂಡಿದೆ.

ಮೂವರ ಹೆಸರು ಅಂತಿಮ ಪಟ್ಟಿಯಲ್ಲಿ: ಪುತ್ತೂರು ಕ್ಷೇತ್ರಕ್ಕೆ ಸಂಬಂಧಿಸಿ ಅಭ್ಯರ್ಥಿಗಳಾಗಿ ಮೂವರ ಹೆಸರು ಅಂತಿಮ ಪಟ್ಟಿಯಲ್ಲಿದೆ. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ರೈ ಕೋಡಿಂಬಾಡಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ.ರವರ ಹೆಸರು ಅಂತಿಮ ಪಟ್ಟಿಯಲ್ಲಿದೆ. ಈ ಮೂವರಲ್ಲಿ ಯಾರ ಹೆಸರು ಘೋಷಣೆಯಾಗುತ್ತದೆ ಎಂಬುದು ಕುತೂಹಲಕಾರಿಯಾಗಿದೆ.

LEAVE A REPLY

Please enter your comment!
Please enter your name here